ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 70 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇದ್ದು, ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ನಡೆಯದೆ ಹಲವಾರು ವರ್ಷಗಳು ಕಳೆದಿವೆ.ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡಿ, ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕು ಎಂದು ಶನಿವಾರ ಮುಕ್ತಾಯಗೊಂಡ ದಕ್ಷಿಣ ಕನ್ನಡ ಜಿಲ್ಲಾ 27ನೇ ಸಾಹಿತ್ಯ ಸಮ್ಮೇಳನ ಆಗ್ರಹಿಸಿದೆ.
ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಶನಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಕೋಶಾಧ್ಯಕ್ಷ ಐತ್ತಪ್ಪ ನಾಯ್ಕ್ ಸಮ್ಮೇಳನದ ನಿರ್ಣಯ ಮಂಡಿಸಿದರು.
ಅನುದಾನಿತ ಶಾಲೆಗಳಲ್ಲಿ ಸುಮಾರು ಕೆಲವು ವರ್ಷಗಳಿಂದ ಯಾವುದೇ ಹುದ್ದೆ ಭರ್ತಿ ಮಾಡಿಲ್ಲ, ಪರಿಣಾಮವಾಗಿ ಹಲವಾರು ಶಾಲೆಗಳು ಶಿಕ್ಷಕರ ಕೊರತೆಯಿಂದ ಬಾಗಿಲು ಮುಚ್ಚಿವೆ,
Source Prajavani







