ಬೀದರ: ಕಾಶ್ಮೀರದಲ್ಲಿ ಉಗ್ರರ ದಾಳಿ ಹೇಡಿ ಕೃತ್ಯ ಉಗ್ರವಾಗಿ ಖಂಡಿಸುತ್ತೇನೆ. ಇದರಿಂದ ಭಾರತದ ಎಲ್ಲಾ ಜನತೆಗೆ ನೀವು ಉಂಟುಮಾಡಿದೆ ಮತ್ತು ಪ್ರವಾಸಿಗರಿಗೆ ಸೂಕ್ತ ಭದ್ರತೆ ನೀಡಬೇಕಾದ್ದು, ಕೇಂದ್ರ ಹಾಗೂ ಕಾಶ್ಮೀರ ಸರ್ಕಾರದ ಜವಾಬ್ದಾರಿ. ಆದರೆ ಕೇಂದ್ರ ಗೃಹ ಸಚಿವಾಲಯ ಜವಾಬ್ದಾರಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಕೇಂದ್ರ ಸರ್ಕಾರ 370 ವಿಧಿ ರದ್ದತಿ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಬಳಿಕ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ಸದ್ದಡಗಿಸಿದ್ದು, ಪ್ರವಾಸಕ್ಕೆ ಮುಕ್ತವಾಗಿದೆ. ಜನರು ನಿರ್ಭೀತಿಯಿಂದ ಕಾಶ್ಮೀರಕ್ಕೆ ಬನ್ನಿ ಎಂದು ಪದೇ ಪದೇ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ದೇಶ-ವಿದೇಶದ ಪ್ರವಾಸಿಗರು ಕೇಂದ್ರ ಸರ್ಕಾರದ ಹೇಳಿಕೆ ನಂಬಿ ಕಾಶ್ಮೀರಕ್ಕೆ ಸಹಸ್ರ ಸಂಖ್ಯೆಯಲ್ಲಿ
ಆಗಮಿಸುತ್ತಿದ್ದರು. ನೂರಾರು ಜನ ಪ್ರವಾಸಿಗರಿದ್ದ ಜಾಗದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಸುರಕ್ಷತೆ ಇರಲಿಲ್ಲವೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ಇದು ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಹುಗಾರಿಕೆ ವೈಫಲ್ಯವೇ ಆಗಿದೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಕನ್ನಡಿಗರ ಮೃತದೇಹ ತರಲು ಮತ್ತು ಕಾಶ್ಮೀರ ಪ್ರವಾಸಕ್ಕೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವ 40ಕ್ಕೂ ಹೆಚ್ಚು ರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ತಾಯಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಸಿಎಂ ಈಗಾಗಲೇ ಸೂಚನೆ ನೀಡಿದ್ದಾರೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಸಚಿವ ಸಂತೋಷ್ ಲಾಡ್ ಘಟನಾ ಸ್ಥಳಕ್ಕೆ ಹೋಗಿದ್ದು, ನೊಂದವರಿಗೆ ಸಾಂತ್ವನ ಹೇಳಿ ನೆರವಿಗೆ ನಿಂತಿದ್ದಾರೆ. ರಾಜ್ಯ ಸರ್ಕಾರ ಈ ನೋವಿನ ಸಂದರ್ಭದಲ್ಲಿ ನೊಂದವರ ಜೊತೆ ನಿಲ್ಲುತ್ತದೆ ಎಂದಿದ್ದಾರೆ.







