ಚಿತ್ರದುರ್ಗ, ಜೂನ್. 11 : ಜವಾಹರ್ ನವೋದಯ ವಿದ್ಯಾಲಯ (ಮಾನವ ಸಂಪನ್ಮೂಲ ಇಲಾಖೆ, ಭಾರತ ಸರ್ಕಾರ), ಉಡುವಳ್ಳಿ, ಹಿರಿಯೂರು ತಾಲ್ಲೂಕು, ಚಿತ್ರದುರ್ಗ ಜಿಲ್ಲೆ 2026-27ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29.07.2025 ಯಾಗಿದ್ದು ಅರ್ಜಿಯನ್ನು https://cbseitms.rcil.gov.in/nvs/Index/Registration ವೆಬ್ ಸೈಟ್ನಲ್ಲಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು, 2025-26ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01.05.2014 ರಿಂದ 30.07.2016ರ ನಡುವೆ ಜನಿಸಿರಬೇಕು. ಪರೀಕ್ಷೆ ನಡೆಯುವ ದಿನಾಂಕ 13.12.2025 ಅಗಿರುತ್ತೇದೆ ಎಂದು ಜ.ನ.ವಿ, ಉಡುವಳ್ಳಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ







