Home » ಉದ್ಯೋಗ » ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೇಡಿಕೇರಿ : ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜು, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಇಲ್ಲಿಗೆ ವಿಜ್ಞಾನ ವಿಭಾಗದ ಭೌತಶಾಸ್ತ್ರ (01 ಹುದ್ದೆ) ಮತ್ತು ರಸಾಯನಶಾಸ್ತ್ರ(01 ಹುದ್ದೆ) ವಿಷಯಗಳಿಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜೂನ್, 27 ರೊಳಗೆ ಸಲ್ಲಿಸಬಹುದು(ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು). ವೇತನ ಶ್ರೇಣಿ ರೂ.18,150. ಎಂಎಸ್ಸಿ, ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂ.ಸಂ. 08272-225528, 9686138688 ಹಾಗೂ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ. 7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This