ಬಳ್ಳಾರಿ: ಮೀನುಗಾರಿಕೆ ಇಲಾಖೆಯಿಂದ 2025–26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ಪರಿಶಿಷ್ಟ ಜಾತಿಯ 01 ಮತ್ತು ಪರಿಶಿಷ್ಟ ಪಂಗಡದ 02 ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಗುರಿ ನಿಗದಿಪಡಿಸಲಾಗಿದ್ದು, ಖರೀದಿಸುವ ವಾಹನದ ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ.ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜನವರಿ 12ರೊಳಗಾಗಿ ಜಿಲ್ಲೆಯ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ ಹಾಗೂ ಕುರುಗೋಡು ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಮೊ.7406508971 ಅಥವಾ ಸಂಡೂರು ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಮೊ.7204911897 ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







