Home » ರಾಜ್ಯ » ಪೊಲೀಸ್‌ ಕಾನ್‌ಸ್ಟೆಬಲ್‌ ವಯೋಮಿತಿ ಹೆಚ್ಚಳ? ಗೃಹ ಸಚಿವರಿಂದ ಬಿಗ್ ಅಪ್ಲೇಟ್

ಪೊಲೀಸ್‌ ಕಾನ್‌ಸ್ಟೆಬಲ್‌ ವಯೋಮಿತಿ ಹೆಚ್ಚಳ? ಗೃಹ ಸಚಿವರಿಂದ ಬಿಗ್ ಅಪ್ಲೇಟ್

ಕುಂದಾಪುರ (ಜೂ.15): ಅನ್ಯ ರಾಜ್ಯಗಳಲ್ಲಿನ ವಿವರ ಪಡೆದು ಪೊಲೀಸ್‌ ಕಾನ್‌ಸ್ಟೆಬಲ್ ಅಭ್ಯರ್ಥಿಗಳ ವಯೋಮಿತಿ 33 ವರ್ಷಕ್ಕೆ ಏರಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಪರಮೇಶ್ವರ್ ಹೇಳಿದರು.

ಅವರು ಶನಿವಾರ ಕೋಟ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಬ್ಬಂದಿ ಕೊರತೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಪ್ರತಿಯೊಂದು ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು ಮತ್ತು ಎಲ್ಲ ಜಾತಿ, ಸಮುದಾಯದ ಸಣ್ಣ, ದೊಡ್ಡ ಪ್ರಾರ್ಥನಾ ಮಂದಿರಗಳಿಗೆ ರಾತ್ರಿ ಬೆಳಕಿನ ಸೌಲಭ್ಯ ಹಾಗೂ ಸಿಸಿಟಿವಿ ಅಳವಡಿಸಿ, ಅದರ ಮಾಹಿತಿ ಪ್ರತಿದಿನ ಠಾಣಾ ವ್ಯಾಪ್ತಿಯಲ್ಲಿ ಬರುವಂತೆಯೂ ಗೃಹಸಚಿವರು ಸಲಹೆ ನೀಡಿದರು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This