ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕಂಪನಿ ಯಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಒಟ್ಟು 40 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜೂನ್ 30, ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ
ಸೀನಿಯರ್ ಸಾಫ್ಟ್ವೇರ್ ಟ್ರೈನಿ ಮತ್ತು ಜೂನಿಯರ್ ಸಾಫ್ಟ್ವೇರ್ ಟ್ರೈನಿ ವಿಭಾಗದಲ್ಲಿ ತಲಾ 15 ಹುದ್ದೆಗಳು ಹಾಗೂ ಸಾಫ್ಟ್ವೇರ್ ಪ್ರೊಫೆಷನಲ್ಸ್ – 10 ಹುದ್ದೆಗಳು ಖಾಲಿ ಇದ್ದು, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಅಭ್ಯರ್ಥಿಗಳು ಎಂಸಿಎ, ಎಂಎಸ್ಸಿ, ಬಿಸಿಎ, ಬಿಎಸ್ಸಿ, ಬಿಇ ಅಥವಾ ಬಿಟೆಕ್ ಪದವಿಯನ್ನು ಪಡೆದಿರಬೇಕು.
ವಯೋಮಿತಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೀನಿಯರ್ ಸಾಫ್ಟ್ವೇರ್ ಟ್ರೈನಿ ಹುದ್ದೆಗೆ ಅಭ್ಯರ್ಥಿಗಳ ಗರಿಷ್ಠ 18 ವರ್ಷ, ಜೂನಿಯರ್ ಸಾಫ್ಟ್ವೇರ್ ಟ್ರೈನಿ ಹುದ್ದೆಗೆ ಗರಿಷ್ಠ 26 ವಯೋಮಿತಿ, ಸಾಫ್ಟ್ವೇರ್ ಪ್ರೋಫೆಷನಲ್ಸ್ ಹುದ್ದೆಗೆ ಅಭ್ಯರ್ಥಿಗಳು 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾAಡಲಾಗಿದೆ.
ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ಜೂನಿಯರ್ ಸಾಫ್ಟ್ವೇರ್ ಟ್ರೈನಿ ಹುದ್ದೆಗೆ 150ರೂ, ಜೂನಿಯರ್ ಸಾಫ್ಟ್ವೇರ್ ಟ್ರೈನಿ ಹುದ್ದೆಗೆ 100, ಸಾಫ್ಟ್ವೇರ್ ಪ್ರೊಫೆಷನಲ್ ಹುದ್ದೆಗೆ 450 ರೂ ಆಗಿದೆ.
ಆಯ್ಕೆ ವಿಧಾನ
ಈ ಹುದ್ದೆಗಳಿಗ್ರ್ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 30 ಆಗಿದೆ.
ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ https://bel-india.in ಭೇಟಿ ನೀಡಿ







