Home » ಇತ್ತೀಚಿನ ಸುದ್ದಿ » ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಒಂದು ಒಳ್ಳೆಯ ಸುದ್ಧಿ ಅದು ಏನಂದರೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಮಾರ್ಚ್ ತಿಂಗಳಿನಲ್ಲಿ ಫೆಬ್ರವರಿ ಮತ್ತು ಮಾರ್ಚ್ ಎರಡು ತಿಂಗಳಿನದ್ದು ಸೇರಿಸಿ 10 ಕೆಜಿ ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2.90 ಲಕ್ಷ ಪಡಿತರ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗಿದೆ.

ಇವುಗಳಲ್ಲಿ 1.65 ಲಕ್ಷ ಕಾರ್ಡ್ ಗಳನ್ನು ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಆಗ ಕೇಂದ್ರ ಸರ್ಕಾರ ಮತ್ತು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಅಕ್ಕಿ ಕೊಡಲಿಲ್ಲ. ಈಗ ಅಕ್ಕಿ ಕೊಡುವುದಾಗಿ ಮುಂದೆ ಬಂದಿದ್ದಾರೆ. ಹೀಗಾಗಿ ಫೆಬ್ರವರಿ ತಿಂಗಳಿಂದಲೇ ಹಣದ ಬದಲು ಅಕ್ಕಿ ವಿತರಣೆ ಮಾಡುತ್ತೇವೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನದ್ದು ಸೇರಿಸಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This