ಬೆಂಗಳೂರು: ಇನ್ನೊಂದು ವಾರವಷ್ಟೇ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಆರಂಭವಾಗುತ್ತವೆ. ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ. ಅದರ ಜೊತೆಗೆ ಮಾರ್ಚ್ 21ರಿಂದ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ಶುರುವಾಗಲಿವೆ. ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಶಿಕ್ಷಣ ಇಲಾಖೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಪರೀಕ್ಷೆಗೆ ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಇಲಾಖೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದೆ. ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಅಧಿಕಾರಿಗಳ ಮಟ್ಟದಲ್ಲಿ ಹಂಚಿಕಿಂಡು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ.
ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿಲಾಗಿದ್ದು, ಸುತ್ತ ಮುತ್ತ ಯಾವುದೇ ರೀತಿಯ ತೊಂದರೆಗಳಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಶ್ನೆ ಪತ್ರಿಕೆಯ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದೆ. ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಅವರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ಈ ಬಾರಿ ಪರೀಕ್ಷೆ ನಡೆಸುವುದನ್ನು ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಿಸಲಾಗುತ್ತದೆ. ಆದ್ದರಿಂದ ಪ್ರಯಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮಾರಾ ಅಳವಡಿಕೆ ಕಡ್ಡಾಯವಾಗಿರುತ್ತದೆ. ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ
Source ಸುದ್ಧಿಒನ್







