Home » ರಾಜ್ಯ » ರಾಜ್ಯಾದ್ಯಂತ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳು ಬಂದಕ್ಕೆ ಕಾರಣ ವೇನು?

ರಾಜ್ಯಾದ್ಯಂತ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳು ಬಂದಕ್ಕೆ ಕಾರಣ ವೇನು?

ಕರ್ನಾಟ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೌಕರರ ಸಂಘವು ಉಪ ನೋಂದಣಾಧಿಕಾರಿಗಳು ಹಾಗೂ ಸಿಬ್ಬಂದಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದೆ. ಈ ಮುಷ್ಕರ ನಡೆದರೆ ರಾಜ್ಯ ಸಬ್‌ ರಿಜಿಸ್ಟ್ರಾರ್‌ ಕಚೇರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಉಪ ನೋಂದಣಾಧಿಕಾರಿ ಹಾಗೂ ಇಲಾಖೆ ಸಿಬ್ಬಂದಿ ಇದೇ ಫೆಬ್ರವರಿ 27ರಿಂದ ಮುಷ್ಕರ ನಡೆಸಲಿದ್ದಾರೆ ಮಾಡುವ ಮುಂಚೆ ಎಂದು ತಿಳಿದುಬಂದಿದೆ.

ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೌಕರರ ಸಂಘದಿಂದ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಆಸ್ತಿ ದಸ್ತಾವೇಜು, ನೋಂದಣಿ ಸೇರಿದಂತೆ ಇನ್ನಿತರೆ ಸೇವೆಗಳು ಆ ದಿನ ಬಂದ್‌ ಆಗುವ ಸಾಧ್ಯತೆ ಇದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಈ ಸೇವೆಗಳು ಸಿಗುವುದಿಲ್ಲ. ಇದರಿಂದ ಸಾರ್ವಜನಿಕರಿಗೂ ಸಕಾಲಕ್ಕೆ ಯಾವುದೇ ಕೆಲಸಗಳು ಪೂರ್ಣಗೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದೆ.

ಬೇಡಿಕೆಗಳೇನು?: ಕಾವೇರಿ-2 ತಂತ್ರಾಂಶದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವುದು, ಕರ್ನಾಟಕ ನೋಂದಣಿ ಕಾಯ್ದೆಗೆ 22 ಬಿ ಕಲಂ ಸೇರಿಸಿರುವುದನ್ನು ವಿರೋಧಿಸಿ, ಮಾಹಿತಿ ಹೆಸರಿನಲ್ಲಿ ಉಪ ನೋಂದಣಾಧಿಕಾರಿಗಳಿಗೆ ಐಟಿ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದನ್ನು ತಪ್ಪಿಸುವುದು, ಫೇಸ್‌ಲೆಸ್ ರಿಜಿಸ್ಟ್ರೇಷನ್ ಸೇರಿದಂತೆ ಇಲಾಖೆಯಲ್ಲಿ ಕಂಡುಬರುತ್ತಿರುವ ಸರ್ವರ್ ಸಮಸ್ಯೆ, ಉಪ ನೋಂದಣಾಧಿಕಾರಿಗಳ ಟ್ರಾನ್ಸ್‌ಫರ್‌ಗೂ ಪ್ರತ್ಯೇಕ ನಿಯಮ ರೂಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೌಕರರ ಸಂಘ ಮುಷ್ಕರಕ್ಕೆ ಮುಂದಾಗಿದೆ. ಹಾಗಾಗಿ ಸಿಬ್ಬಂದಿ ಎಲ್ಲ ಸೇವೆಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.

ಕಂದಾಯ ಸಚಿವರಾದ ಕೃಷ್ಣಬೈರೇಗೌಡ

ರಾಜ್ಯದಲ್ಲಿ ಕಳೆದ ಒಂದು ವಾರದಿಂದಲೂ ಜನ ಸಬ್-ರಿಜಿಸ್ಟ್ರಾರ್‌ಗಳ ಕಚೇರಿಗಳ ಮುಂದೆ ತಾಸುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಆದರೆ ಕಾವೇರಿ-2 ತಂತ್ರಾಂಶದಲ್ಲಿ ಬಹಳಷ್ಟು ಸಮಸ್ಯೆಗಳು ಉಂಟಾಗಿರುವುದರಿಂದ ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದಲ್ಲಿ ನಿತ್ಯವೂ ಸಾವಿರಾರು ಆಸ್ತಿಗಳ ರಿಜಿಸ್ಟ್ರೇಷನ್ ಆಗುತ್ತದೆ. ಆದರೆ ಈ ವರ್ಷದ ಜನವರಿ ಅಂತ್ಯದಿಂದ ಹಾಗೂ ಫೆಬ್ರವರಿ 1ರಿಂದ ಆಸ್ತಿಗಳ ನೋಂದಣಿಯಲ್ಲಿ ಸಮಸ್ಯೆ ಆಗುತ್ತಿದೆ. ರಾಜ್ಯದ ಪ್ರಮುಖ ನಗರಗಳ ಸಬ್‌ – ರಿಜಿಸ್ಟರ್‌ ಆಫೀಸ್‌ಗಳ ಮುಂದೆ ಜನ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಕಾವೇರಿ-2 ಸಾಫ್ಟವೇರ್‌ನಲ್ಲಿ ಗ್ರಾಹಕ ಲಾಗಿನ್ ಹಾಗೂ ಅಧಿಕೃತ ಲಾಗಿನ್ ಎರಡೂ ಸಹ ಕೆಲಸ ಮಾಡದೆ ಇರುವುದರಿಂದ ರಿಜಿಸ್ಟ್ರೇಷನ್‌ ಸಮಸ್ಯೆ ಆಗುತ್ತಿದೆ.

Source oneindia

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This