Home » ರಾಜ್ಯ » ಶೀತ ಅಲೆ ತೀವ್ರ: ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಶೀತ ಅಲೆ ತೀವ್ರ: ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕಕ್ಕೆ ಸೀಮಿತವಾಗಿದ್ದ ಮೈಕೊರೆವ ಚಳಿ ಇದೀಗ ದಕ್ಷಿಣ ಒಳನಾಡಿಗೂ ವಿಸ್ತರಿಸಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶೀತ ಅಲೆಯ ತೀವ್ರತೆಯನ್ನು ಗಮನಿಸಿ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಕೆಲವು ದಿನಗಳಲ್ಲೂ ಚಳಿ ಮತ್ತು ಒಣಹವೆ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಅಲೆ

ವಾರದ ಹಿಂದೆ ಬೀದರ್ ಜಿಲ್ಲೆಯಲ್ಲಿ ಅತೀ ಕಡಿಮೆ ತಾಪಮಾನ ದಾಖಲಾಗಿದ್ದ ಹಿನ್ನೆಲೆಯಲ್ಲಿ ಮೊದಲಿಗೆ ಯೆಲ್ಲೋ ಅಲರ್ಟ್ ನೀಡಲಾಗಿತ್ತು. ಆದರೆ ಶೀತ ಅಲೆಯ ತೀವ್ರತೆ ಹೆಚ್ಚಿದ ಕಾರಣ ಶುಕ್ರವಾರದಿಂದ (ಡಿ.12) ರಾಜ್ಯದ ಉತ್ತರ ಭಾಗದಲ್ಲಿ ಭಾರೀ ಚಳಿ ಮುಂದುವರಿಯುವ ನಿರೀಕ್ಷೆಯಿದ್ದು, ಬೀದರ್, ಕಲಬುರಗಿ, ರಾಯಚೂರು, ಗದಗ, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿಗೂ ವಿಸ್ತರಿಸಿದ ಚಳಿ

ಉತ್ತರ ಒಳನಾಡಿನ ಹಲವೆಡೆ ದಟ್ಟ ಮಂಜು ಆವರಿಸಿಕೊಂಡಿದ್ದು, ಸಂಜೆ ನಂತರ ಹೊರಾಂಗಣ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿವೆ. ಜನರು ಬೆಚ್ಚಗಿನ ಬಟ್ಟೆ ಧರಿಸಿ ಮನೆ ಒಳಗೇ ಉಳಿಯುತ್ತಿದ್ದಾರೆ. ಹಗಲು ಸಮಯದಲ್ಲಿ ಬಿಸಿಲು ಹಾಗೂ ಒಣಹವೆ ವಾತಾವರಣ ಕಂಡು ಬಂದರೂ, ಸಂಜೆ ಆಗುತ್ತಿದ್ದಂತೆ ಚಳಿ ಹೆಚ್ಚಾಗಿ ಮುಂದಿನ ದಿನ ಬೆಳಗ್ಗೆ ಸುಮಾರು 9 ಗಂಟೆವರೆಗೆ ಮುಂದುವರಿಯುತ್ತಿದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This