Home » Uncategorized » ಸರ್ಕಾರಿ ನೌಕರರು NPS ಖಾತೆಯಲ್ಲಿನ ಮೊತ್ತ ಹಿಂಪಡೆಯಲು ಮಾರ್ಗಸೂಚಿ ಹೋರಡಿಸಿ ದ್ದಾರೆ : ಇಲ್ಲಿದೆ ಸಂಪೂರ್ಣ ವಿವರ

ಸರ್ಕಾರಿ ನೌಕರರು NPS ಖಾತೆಯಲ್ಲಿನ ಮೊತ್ತ ಹಿಂಪಡೆಯಲು ಮಾರ್ಗಸೂಚಿ ಹೋರಡಿಸಿ ದ್ದಾರೆ : ಇಲ್ಲಿದೆ ಸಂಪೂರ್ಣ ವಿವರ

ಫೆಬ್ರವರಿ 21: ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವಂತ ಸರ್ಕಾರಿ ನೌಕರರ ಎನ್ ಪಿ ಎಸ್ ಪ್ರಾನ್ ಖಾತೆಯಲ್ಲಿನ ಮೊತ್ತವನ್ನು ಹಿಂಪಡೆಯುವ ಕೂರಿತಂತೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ.

ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ ಎಂದಿದೆ. ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರಿ ಆದೇಶದನ್ವಯ ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಒಂದು ಬಾರಿಯ ಕ್ರಮವಾಗಿ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿರುತ್ತದೆ.

ಪ್ರಸ್ತುತ ಮೇಲಿನ ದಿನಾಂಕ: 24.01.2024ರ ಸರ್ಕಾರಿ ಆದೇಶದನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ ಪಿಂಚಿಣಿ ಯೋಜನೆಯ ವ್ಯಾಪ್ತಿಗೊಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿನ ನೌಕರರ ಮತ್ತು ಸರ್ಕಾರದ ವಂತಿಗೆಯನ್ನು ಹಿಂಪಡೆಯುವ ಕುರಿತು ಹಾಗೂ ಸಂಬಂಧಿತ ಸರ್ಕಾರಿ ನೌಕರರಿಗೆ ಜಿ.ಪಿ.ಎಫ್.ಖಾತೆಯನ್ನು ತೆರೆಯುವುದು ಮುಂತಾದ ವಿಷಯಗಳ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಆದೇಶ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 24.01.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/99/2023ರನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡುವ ಸೇವೆಯಲ್ಲಿರುವ/ನಿವೃತ್ತಿ ಹೊಂದಿದ/ಮರಣ ಹೊಂದಿದ ಅರ್ಹ ಸರ್ಕಾರಿ ಅಧಿಕಾರಿ/ನೌಕರರ ಪ್ರಾನ್ ಖಾತೆಯಲ್ಲಿರುವ ಮೊತ್ತವನ್ನು ಹಿಂಪಡೆಯಬೇಕಾಗಿರುವುದರಿಂದ ಈ ಕುರಿತು ವಿವಿಧ ಹಂತಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಸಂಬಂಧಪಟ್ಟವರ ಜವಾಬ್ದಾರಿಗಳನ್ನು ಈ ಕೆಳಕಂಡಂತೆ ನಿಗಧಿಪಡಿಸಿದೆ.

ಇಲಾಖಾ ಮುಖ್ಯಸ್ಥರುಗಳ ಜವಾಬ್ದಾರಿಗಳು ಮತ್ತು ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಗಳ (ಡಿಡಿಒ) ಜವಾಬ್ದಾರಿಗಳು ಎಂದು ರಾಜ್ಯ ಸರ್ಕಾರ ಮಾರ್ಗ ಸೂಚಿಯನ್ನು ಹೊರಡಿಸಿದ್ದಾರೆ

Source by Oneindia

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This