ಬೆಂಗಳೂರು:
2025–26ನೇ ಆನೆಯನ್ನು ಮುಂದುವರೆಸಿ ಜಾರಿಗೊಳಿಸುವುದಕ್ಕೆ ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
ಆದೇಶದಲ್ಲಿ, 2024–25ನೇ ಸಾಲಿನಲ್ಲಿ ಸಹಕಾರ ಇಲಾಖೆಯಿಂದ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಅಗತ್ಯ ಮಾರ್ಗಸೂಚಿಗಳೊಂದಿಗೆ ಸರ್ಕಾರ ಆದೇಶ ಹೊರಡಿಸಲಾಗಿತ್ತು ಎಂದು ಉಲ್ಲೇಖಿಸಲಾಗಿದೆ. ಅದರ ಮುಂದುವರಿಕೆಯಾಗಿ 2025–26ನೇ ಸಾಲಿಗೂ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದೆ.
ಯಶಸ್ವಿನಿ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ) ಅವರು ಸರ್ಕಾರಕ್ಕೆ ಸಲ್ಲಿಸಿರುವ ಪತ್ರದಲ್ಲಿ, ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಆರೋಗ್ಯ ರಕ್ಷಣೆಗೆ ಸರ್ಕಾರ ಜಾರಿಗೊಳಿಸಿರುವ ಪ್ರತಿಷ್ಠಿತ (Flagship) ಮತ್ತು ವಿಶಿಷ್ಟ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ. ಯಶಸ್ವಿನಿ ಫೋಟೋಕಾಲ್ ಪ್ರಕಾರ ನಿಗದಿಪಡಿಸಿರುವ ಚಿಕಿತ್ಸಾ ಪ್ಯಾಕೇಜ್ ದರಗಳ ಮಿತಿಯೊಳಗೆ, ಫಲಾನುಭವಿಗಳು ಹಾಗೂ ಅವರ ಕುಟುಂಬದ ಸದಸ್ಯರು ವಾರ್ಷಿಕ ಗರಿಷ್ಠ ರೂ.5.00 ಲಕ್ಷವರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಅವಕಾಶವಿದೆ ಎಂದು ವಿವರಿಸಿದ್ದಾರೆ. ಈ ಸೌಲಭ್ಯವನ್ನು ರಾಜ್ಯಾದ್ಯಂತ ಇರುವ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಪಡೆಯಬಹುದಾಗಿದೆ.
ಯಶಸ್ವಿನಿ ಯೋಜನೆಯು ವಿಮಾ ಯೋಜನೆಯಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಇದು ಸ್ವಯಂ ನಿಧಿ ಆಧಾರಿತ ಆರೋಗ್ಯ ರಕ್ಷಣಾ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ. ಸಹಕಾರ ಸಂಘಗಳ ಸದಸ್ಯರು ನಿಗದಿತ ವಾರ್ಷಿಕ ವಂತಿಗೆಯನ್ನು ಪಾವತಿ







