Home » ಉದ್ಯೋಗ » ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ

ಹಾವೇರಿ ಜಿಲ್ಲಾ ಪಂಚಾಯತ್ ನೇಮಕಾತಿ

ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾವೇರಿ ಇಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ : ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಬಿಇ (ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ ಇನ್ಫಾರ್ಮೆಷನ್ ಸೈನ್ಸ್)/ ಎಂಸಿಎ/ ಬಿಸಿಎ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಹೊಂದಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ, ಸದರಿ ಪಟ್ಟಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅನುಭವ : ಕನಿಷ್ಠ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 16, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 30, 2025
ದಾಖಲೆಗಳ ಪರಿಶೀಲನೆ ದಿನಾಂಕ : ಜುಲೈ 10, 2025

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This