Home » ಕ್ರೀಡೆಗಳು » 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಭಾರತ

2025ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಭಾರತ

ದುಬೈ : ವಿರಾಟ್ ಕೊಹ್ಲಿ ಬ್ಯಾಟಿಂಗ್ ಎಲ್ಲರಿಗೂ ಸಮಾಧಾನ ನೀಡಿತ್ತು. ವಿರಾಟ್ ಕೊಹ್ಲಿಯ ಹೋರಾಟ ಆಸ್ಟ್ರೇಲಿಯಾ ತಂಡದ ತಲೆನೋವು ಹೆಚ್ಚಿಸಿತ್ತು. ಆದರೆ ಮಹತ್ವದ ಘಟ್ಟದಲ್ಲಿ ಕೊಹ್ಲಿ ವಿಕೆಟ್ ಪತನ ಟೀಂ ಇಂಡಿಯಾದಲ್ಲಿ ಮತ್ತೆ ಆತಂಕಕ್ಕೆ ಕಾರಣಾಗಿತ್ತು.

ಆದರೆ ಕೊನೆಯ ಹಂತದಲ್ಲಿ ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಹೊಡೆತಕ್ಕೆ ಆಸ್ಟ್ರೇಲಿಯಾ ಸುಸ್ತಾಗಿತ್ತು. ಗೆಲುವಿಗೆ ಇನ್ನೇನು 6 ರನ್ ಮಾತ್ರ ಬಾಕಿ ಇತ್ತು. ಅಷ್ಟರಲ್ಲೇ ಪಾಂಡ್ಯ ವಿಕೆಟ್ ಕೈಚೆಲ್ಲಿದರು. ಆದರೆ ರಾಹುಲ್ ಭರ್ಜರಿ ಸಿಕ್ಸರ್ ಸಿಡಿಸಿ ಭಾರತಕ್ಕೆ 4 ವಿಕೆಟ್ ಗೆಲುವು ತಂದುಕೊಟ್ಟರು. ಈ ಮೂಲಕ ಭಾರತ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This