Home » ಉದ್ಯೋಗ » 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ

5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ

ಕಲಬುರಗಿ, ಏಪ್ರಿಲ್15:‌ ರಾಜ್ಯದಲ್ಲಿ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ.‌ ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ.‌ ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು. ಇನ್ನು 371 ಮೀಸಲಾತಿಯಂತೆ ಸ್ಥಳೀಯರಿಂದ ಹುದ್ದೆ ಭರ್ತಿ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ 371ಜೆ ಪರಿಣಾಮಕಾರಿ ಅನುಷ್ಠಾನ‌ ಸಚಿವ‌ ಸಂಪುಟ ಉಪ ಸಮಿತಿ ಸಭೆಯಲ್ಲಿ ಲೋಕಲ್ ಕೇಡರ್ ಹುದ್ದೆಗಳನ್ನು ಹಣಕಾಸು ಇಲಾಖೆ ಅನುಮತಿ ಇಲ್ಲದೆ ನೇಮಕ ಮಾಡಿಕೊಳ್ಳಲು ಕಾಯ್ದೆಯಲ್ಲಿಯೇ ಅವಕಾಶ ನೀಡಿದ್ದು, ಅದರಂತೆ ಇಲಾಖೆಗಳು ನೇಮಕಾತಿ ಚುರುಕುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿಯೇ ಕಲ್ಯಾಣ ಕರ್ನಾಟಕ ಭಾಗದ ಶೇ.90ರಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇನ್ನೂ ಪ್ರೌಢಶಾಲಾ ಸಹಾಯಕ ಶಿಕ್ಷಕರ ಬಡ್ತಿ ನಿರೀಕ್ಷೆಯಲ್ಲಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. 2016ಕ್ಕೂ ಪೂರ್ವದಲ್ಲಿ ನೇಮಕಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರನ್ನು 2017ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 1ರಿಂದ 5 ನೇ ವರ್ಗಕ್ಕೆ ಸೀಮಿತಗೊಳಿಸಿ ಪೂರ್ವಾನ್ವಯಗೊಳಿಸುವುದು ಸರಿಯಾದ ಕ್ರಮವಲ್ಲ ಎಂದು ಸರ್ಕಾರದ ಕಾನೂನು ಇಲಾಖೆ ಅಭಿಪ್ರಾಯಪಟ್ಟಿರುವುದಾಗಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ತಿಳಿಸಿದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This