Home » ಇತ್ತೀಚಿನ ಸುದ್ದಿ » ಹೊಸ ಬಿಪಿಎಲ್ ಪಡಿತರ ಚೀಟಿ ವಿತರಣೆ ಶೀಘ್ರ

ಹೊಸ ಬಿಪಿಎಲ್ ಪಡಿತರ ಚೀಟಿ ವಿತರಣೆ ಶೀಘ್ರ

ಬೆಂಗಳೂರು: ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ ಶುರುವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

91,000ಗಳನ್ನು ಪರಿಶೀಲಿಸಿ ಪಡಿತರ ಚೀಟಿ ನೀಡುವುದು ಬಾಕಿ ಇದೆ. ಇನ್ನೆರಡು ತಿಂಗಳಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿ ನೀಡುವ ಪ್ರಕ್ರಿಯೆ ಶುರುವಾಗಲಿದೆ.

ಜೊತೆಗೆ ಕೇಂದ್ರ ಸರ್ಕಾರದ ಮಾನದಂಡಗಳನ್ನು ಮುಂದಿಟ್ಟುಕೊಂಡು ಕಾರ್ಡುಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ ಮನೆಗಳಿಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿದ ಸುಮಾರು 20 ಲಕ್ಷ ಅನರ್ಹರಿದ್ದು, ಪಿಡಿಒ, ಗ್ರಾಮಲೆಕ್ಕಿಗಳಿಂದ ಖುದ್ದು ಪರಿಶೀಲನೆ ನಡೆಯಲಿದೆ ಎಂದು ಹೇಳಿದ್ದಾರೆ.

Source : ಕನ್ನಡದುನಿಯಾ

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This