ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ರಾಜಸ್ಥಾನ ರಾಯಲ್ಸ್ ವಿರುದ್ಧ 44 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ 2025ರ ಐಪಿಎಲ್‌ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ದೊಡ್ಡ ಮೊತ್ತ ಐಪಿಎಲ್ ಇತಿಹಾಸ ದ 286 ರನ್ ಕಲೆಹಾಕಿದರೂ ಮತ್ತು ರಾಜಸ್ಥಾನ ರಾಯಲ್ಸ್ ಉತ್ತಮ ಹೋರಾಟ ಕೊಟ್ಟು ಸೋಲೊಪ್ಪಿಕೊಂಡಿತು.
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 6 ವಿಕೆಟ್ ಕಳೆದುಕೊಂಡು 286 ಕಲೆಹಾಕಿತು. ಅಭಿಷೇಕ್ ಶರ್ಮಾ 11 ಎಸೆತಗಳಲ್ಲಿ 5 ಬೌಂಡರಿ ಸಹಿತ 24 ರನ್ ಗಳಿಸಿದರು. ಟ್ರಾವಿಸ್ ಹೆಡ್ 31 ಎಸೆತಗಳಲ್ಲಿ 9 ಬೌಂಡರಿ 3 ಸಿಕ್ಸರ್ ಸಹಿತ 67 ರನ್ ಗಳಿಸಿ ಸ್ಫೋಟಕ ಆರಂಭ ನೀಡಿದರು
ಎಸ್‌ಆರ್ ಎಚ್ ಪರವಾಗಿ ಮೊದಲ ಪಂದ್ಯ ಆಡಿದ ಇಶಾನ್ ಕಿಶನ್ ಭರ್ಜರಿ ಶತಕ ಸಿಡಿಸುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಬೃಹತ್ ಮೊತ್ತ ಕಲೆಹಾಕಲು ಕಾರಣವಾದರು. 47 ಎಸೆತಗಳಲ್ಲಿ 11 ಬೌಂಡರಿ 6 ಭರ್ಜರಿ ಸಿಕ್ಸರ್ ಸಹಿತ ಅಜೇಯ 106 ರನ್ ಗಳಿಸಿದರು. ನಿತೀಶ್ ಕುಮಾರ್ ರೆಡ್ಡಿ 15 ಎಸೆತಗಳಲ್ಲಿ 4 ಬೌಂಡರಿ 1 ಸಿಕ್ಸರ್ ಸಹಿತ 30 ರನ್ ಗಳಿಸಿದರೆ, ಹೆನ್ರಿಚ್ ಕ್ಲಾಸೆನ್ 14 ಎಸೆತಗಳಲ್ಲಿ 34 ರನ್ ಗಳಿಸಿದರು.
ಹೋರಾಟ ನೀಡಿದ ರಾಜಸ್ಥಾನ
ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ 50 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೂ ಸಂಜು ಸ್ಯಾಮ್ಸನ್ ಮತ್ತು ಧ್ರುವ್ ಜುರೆಲ್ ತಲಾ ಅರ್ಧಶತಕ ಗಳಿಸುವ ಮೂಲಕ ಹೋರಾಟ ಕೊಟ್ಟರು. ಸಂಜು ಸ್ಯಾಮ್ಸನ್ 37 ಎಸೆತಗಳಲ್ಲಿ 66 ರನ್ ಗಳಿಸಿದರೆ, ಧ್ರುವ್ ಜುರೆಲ್ 35 ಎಸೆತಗಳಲ್ಲಿ 70 ರನ್ ಗಳಿಸಿದರು. ಶಿಮ್ರಾನ್ ಹೆಟ್ಮೆಯರ್ 23 ಎಸೆತಗಳಲ್ಲಿ 1 ಬೌಂಡರಿ 4 ಸಿಕ್ಸರ್ ಸಹಿತ 42 ರನ್ ಗಳಿಸಿದರು. ಶುಭಮ್ ದುಬೆ 11 ಎಸೆತಗಳಲ್ಲಿ ಅಜೇಯ 34 ರನ್ ಗಳಿಸಿ ಸೋಲಿನ ಅಂತರ ಕಡಿಮೆ ಮಾಡಿದರು.
ಈ ಗೆಲುವಿನ ಮೂಲಕ ಎಸ್‌ಆರ್ ಎಚ್ ಉಳಿದ ತಂಡಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಆದರೂ ಬೌಲಿಂಗ್ ವಿಭಾಗದಲ್ಲಿ ದೌರ್ಬಲ್ಯ ಇರುವುದು ಮೊದಲ ಪಂದ್ಯದಲ್ಲೇ ಜಗಜ್ಜಾಹೀರಾಗಿದೆ. ಉಳಿದ ತಂಡಗಳು ಸನ್‌ರೈಸರ್ಸ್ ತಂಡವನ್ನು ಯಾವ ರೀತಿ ಎದುರಿಸುತ್ತದೆ ಎಂದು ನೋಡಬೇಕಿದೆ







