ಜಾತಿ ಆಧಾರಿತ ತಾರತಮ್ಯವನ್ನು ತೊಡೆದುಹಾಕಲು ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ರಾಹುಲ್ ಗಾಂಧಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಯಾರೂ ಎದುರಿಸದಂತೆ ರಾಜ್ಯ ಸರ್ಕಾರ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.







