Home » ರಾಜ್ಯ » ಬೆಳಗಾವಿ : ಸಿ ಎಮ್ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋದರೆ ಉತ್ತಮ: ಜಗದೀಶ್ ಶೆಟ್ಟರ್ ವಾಗ್ದಾಳಿ

ಬೆಳಗಾವಿ : ಸಿ ಎಮ್ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋದರೆ ಉತ್ತಮ: ಜಗದೀಶ್ ಶೆಟ್ಟರ್ ವಾಗ್ದಾಳಿ

ಬೆಳಗಾವಿ: ಪಾಕಿಸ್ತಾನದ ಜೊತೆಗೆ ಯುದ್ಧ ಬೇಡ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ಹೋದರೆ ಒಳ್ಳೇದು ಎಂದು ಸಂಸದ ಜಗದೀಶ್ ಶೆಟ್ಟರ್ರವರು ಹೇಳಿಕೆಯನ್ನು ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯುದ್ಧ ಮಾಡುವದು ಅಥವಾ ಬಿಡುವದು ಕೇಂದ್ರಕ್ಕೆ ಬಿಟ್ಟಿದ್ದು. ಆದರೆ ಮುಖ್ಯಮಂತ್ರಿಗಳ ಹೇಳಿಕೆ ದೇಶಕ್ಕೆ ಅಪಮಾನ ತರುವಂತಹದ್ದಾಗಿದೆ. ಯುದ್ದದ ಅವಶ್ಯಕತೆ ಇಲ್ಲ ಎನ್ನುವ ಸಿಎಂ ಸಿದ್ದರಾಮಯ್ಯ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ ಎಂಬುದನ್ನು ನೆನಪು ಮಾಡಿಕೊಳ್ಳಬೇಕು ಎಂದರು.

ಉಗ್ರರು 28 ಜನರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಇದಕ್ಕೆ ಸರಿಯಾದ ಪಾಠ ಕಲಿಸಿ ಎಂದು ಜನ ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದಾರೆ. ಜನರ ಭಾವನೆ ಹಾಗೂ ಆಕ್ರೋಶ ಇರುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ತುಷ್ಟಿಕರಣ ಹಿನ್ನೆಲೆಯಲ್ಲಿ ಬೋಧನೆ ಆರಂಭ ಮಾಡಿದ್ದಾರೆ. ಉಗ್ರರ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಹಲವು ನಿರ್ಧಾರ ಕೈಗೊಂಡಿದೆ. ಯಾವ ಸಂದರ್ಭದಲ್ಲಿ ಯಾವ ನಿರ್ಧಾರ ಆಗಬೇಕು ಅದನ್ನು ಕೇಂದ್ರ ಮಾಡುತ್ತಿದೆ. ಅಧಿಕೃತವಾಗಿ ಕೇಂದ್ರ ಸರ್ಕಾರ ಯುದ್ಧ ಘೋಷಣೆ ಮಾಡಿಲ್ಲ. ಈ ಸಂದರ್ಭದಲ್ಲಿ ಪಾಕಿಸ್ತಾನ ಅಲ್ಪಸಂಖ್ಯಾತರನ್ನು ಓಲೈಸಲು

ಮುಖ್ಯಮಂತ್ರಿಗಳು ಕೀಳು ಮಟ್ಟದ ಹೇಳಿಕೆಯನ್ನು ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This