ಬೀದರ್: ಗಡಿ ಭಾಗದ ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ 26 ಪ್ರಸ್ತಾವ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ನಡೆದ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವಗಳ ಮನವಿ ಪತ್ರ ಸಲ್ಲಿಸಿದ್ದಾರೆ.
ಕಾರಂಜಾ ನೀರಾವರಿ ಯೋಜನೆಯ ಸಂತ್ರಸ್ತರಿಗೆ ಕೂಡಲೇ ವೈಜ್ಞಾನಿಕ ಪರಿಹಾರ ಕಲ್ಪಿಸಬೇಕು. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರ ಬಾಕಿ ಹಣ ಪಾವತಿಸಬೇಕು. ಮೂಲಸೌಕರ್ಯಕ್ಕೆ ಅನುದಾನ ಕಲ್ಪಿಸಬೇಕು. ಬೀದರ್ ವಿಶ್ವವಿದ್ಯಾಲಯಕ್ಕೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವ-ಣ್ಣನವರ ಹೆಸರಿಟ್ಟು, ವಿಸ್ತರಣಾ ಘಟಕ, ವಿಶೇಷ ಕೇಂದ್ರ ಹಾಗೂ ಮೂಲಸೌಕರ್ಯಕ್ಕಾಗಿ ವಿಶ್ವವಿದ್ಯಾ-ಲಯಕ್ಕೆ ₹100 ಕೋಟಿ ಅನುದಾನ ಬಿಡುಗಡೆಗೊಳಿಸುವುದು ಸೇರಿದಂತೆ 26 ಪ್ರಸ್ತಾವಗಳನ್ನು ಒಳಗೊಂಡ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.







