Home » ರಾಜ್ಯ » ಸುಳ್ಳು ಜಾತಿ ಪತ್ರ ನೀಡುವವರನ್ನು ಒಳ ಹಾಕಬೇಕು: ಮಲ್ಲಿಕಾರ್ಜುನ ಖರ್ಗೆ

ಸುಳ್ಳು ಜಾತಿ ಪತ್ರ ನೀಡುವವರನ್ನು ಒಳ ಹಾಕಬೇಕು: ಮಲ್ಲಿಕಾರ್ಜುನ ಖರ್ಗೆ

ಎಸ್‌ಸಿ ಪಟ್ಟಿಯಲ್ಲಿ ಲಿಂಗಾಯತ ಬೇಡ ಜಂಗಮ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಒಳಮೀಸಲಾತಿ ಕಲ್ಪಿಸಲೆಂದುನಡೆಯುತ್ತಿರುವ ಜಾತಿ ಸಮೀಕ್ಷೆಯ ಎಸ್‌ಸಿ ಪಟ್ಟಿಯಲ್ಲಿ ಲಿಂಗಾಯತ ಬೇಡ ಜಂಗಮ ಸಮುದಾಯವೂ ನುಸುಳುತ್ತಿರುವುದಕ್ಕೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಕೊಡಲು ಸರ್ಕಾರ ಎಸ್‌ಸಿ ಸಮೀಕ್ಷೆ ನಡೆಸುತ್ತಿದೆ. ಒಳಮೀಸಲಾತಿಗೆ ನಾನೆಂದೂ ವಿರೋಧ ಮಾಡಿಲ್ಲ. ಆದರೆ ಲಿಂಗಾಯತ ಸಮುದಾಯದಲ್ಲಿರುವ ಬೇಡ ಜಂಗಮರನ್ನು ನೀವು ಎಸ್‌ಸಿ ಪಟ್ಟಿಗೆ ಸೇರಿಸುತ್ತಿದ್ದೀರಿ. ನಾಲ್ಕು ಲಕ್ಷ ಜನ ಎಸ್‌ಸಿ ಪಟ್ಟಿಗೆ ಹೇಗೆ ಬಂದರು’ ಎಂದು ಸರ್ಕಾರವನ್ನು ಪ್ರಶ್ನಿಸಿದರು.

ಖರ್ಗೆ ಆಕ್ರೋಶ ಕಂಡ ಡಿಸಿಎಂ ಡಿಕೆ ಶಿವಕುಮಾರ್, ಓಡಿ ಬಂದು ಪಕ್ಕದಲ್ಲಿ ನಿಂತು ಅವರ ಮಾತು ಆಲಿಸಿದರು.


ಮಾತು ಮುಂದುವರಿಸಿದ ಖರ್ಗೆ, ‘ಲಿಂಗಾಯತರಲ್ಲಿನ ಬಡ ವರ್ಗದವರಿಗೆ ನಾವು ಅಗತ್ಯ ಬಿದ್ದರೆ ಪ್ರೋತ್ಸಾಹ ನೀಡೋಣ. ಆದರೆ ಬೇಡ ಜಂಗಮರು ತಾವು ಎಸ್ಪಿ ಎಂದು ತೋರಿಸುವುದು ತಪ್ಪು. ಸುಳ್ಳು ಜಾತಿ ಪತ್ರ ನೀಡುವವರನ್ನು ಒಳ ಹಾಕಬೇಕು. ಸರ್ಕಾರ ಇದರ ಬಗ್ಗೆ ಗಮನಹರಿಸಬೇಕು’ ಎಂದರು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This