Home » ರಾಜ್ಯ » ಗೃಹ ಆರೋಗ್ಯ ಯೋಜನೆ ವಿಸ್ತರಣೆ : ಇಂದಿನಿಂದ ಮನೆ ಬಾಗಿಲಲ್ಲೇ ಸಿಗಲಿವೆ ಈ ಆರೋಗ್ಯ ಸೇವೆಗಳು.!

ಗೃಹ ಆರೋಗ್ಯ ಯೋಜನೆ ವಿಸ್ತರಣೆ : ಇಂದಿನಿಂದ ಮನೆ ಬಾಗಿಲಲ್ಲೇ ಸಿಗಲಿವೆ ಈ ಆರೋಗ್ಯ ಸೇವೆಗಳು.!

ಬೆಂಗಳೂರು : ಕರ್ನಾಟಕ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತರ ಮನೆ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಜನ ಸಾಂಕ್ರಾಮಿಕ ಅಲ್ಲದ ರೋಗಗಳ ತಪಾಸಣೆ ನಡೆಸುವುದು, ಔಷಧ ವಿತರಣೆ, ಅಗತ್ಯ ಚಿಕಿತ್ಸೆಗೆ ಸಹಕರಿಸುವ ‘ಗೃಹ ಆರೋಗ್ಯ’ ಯೋಜನೆ ವಿಸ್ತರಣೆಯಾಗಲಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವುದಾಗಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೋಲಾರ ಜಿಲ್ಲೆಯಲ್ಲಿ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ತೀರ್ಮಾನಿಸಲಾಗಿದೆ.

ಮೇಲ್ಪಟ್ಟವರ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ ನಡೆಸಿ ರೋಗ ತಪಾಸಣೆ ಜತೆಗೆ ರೋಗ ಪೀಡಿತರಿಗೆ ಉಚಿತ ಔಷಧ ವಿತರಿಸಲಾಗುವುದು. ಈ ಮೂಲಕ ಅಕಾಲಿಕ ಮರಣ ತಡೆಯುವುದು ಯೋಜನೆಯ ಮುಖ್ಯ ಉದ್ದೇಶ. ಇದಕ್ಕಾಗಿ ಉಚಿತ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ. ಅಂತಹ ರೋಗಿಗಳನ್ನು ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುತ್ತದೆ.

ಈ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶಗಳಲ್ಲಿ ಜಾರಿಗೆ ತಂದು ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಸಹಾಯದಿಂದ ಮನೆ ಬಾಗಿಲಿಗೆ ತೆರಳಿ ತಪಾಸಣೆ ನಡೆಸುತ್ತಾರೆ. ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್‌ನಂತಹ ಸಾಂಕ್ರಾಮಿಕವಲ್ಲದ 14 ರೋಗಗಳ ತಪಾಸಣೆ ನಡೆಸಲಾಗುತ್ತದೆ ಮಂಗಳವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರದಂದು ಮನೆಮನೆಗೆ ಆರೋಗ್ಯ ಕಾರ್ಯಕರ್ತರು ಆರೋಗ್ಯ ಪರೀಕ್ಷೆ ಮಾಡಲು ಬರುತ್ತಾರೆ.

ಗೃಹ ಆರೋಗ್ಯ ಯೋಜನೆಯಡಿ ಸಿಗಲಿವೆ ಈ ಎಲ್ಲಾ ಸೇವೆಗಳು

ಸಕ್ಕರೆ ಕಾಯಿಲೆ

ಅಧಿಕ ರಕ್ತದೊತ್ತಡ

ಬಾಯಿ ಕ್ಯಾನ್ಸರ್

ಸ್ತನ ಕ್ಯಾನ್ಸರ್

ಗರ್ಭಕಂಠದ ಕ್ಯಾನ್ಸ‌ರ್

ಡಯಾಬೆಟಿಕ್ ಫೂಟ್

ಡಯಾಬಿಟಿಕ್ ರೆಟಿನೋಪತಿ

ಮಾನಸಿಕ ಆರೋಗ್ಯ ಅಸ್ವಸ್ಥತೆಗಳು

ನರವೈಜ್ಞಾನಿಕ ಅಸ್ವಸ್ಥತೆಗಳು

ನಿದ್ರೆಯಲ್ಲಿ ಉಸಿರುಗಟ್ಟುವಿಕೆ

ದೀರ್ಘಕಾಲದ ಮೂತ್ರಪಿಂಡ ಕಾಯಿಲೆ

ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ

ಯಕೃತ್ತಿನ ರೋಗ

ರಕ್ತಹೀನತೆ

ಗೃಹ ಆರೋಗ್ಯ ಯೋಜನೆಯ ಪ್ರಮುಖ ಅಂಶಗಳು

ಆರೋಗ್ಯ ಕಾರ್ಯಕರ್ತರ ತಂಡ ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರ ಮನೆಗಳಿಗೆ ಭೇಟಿ ನೀಡಿ ಪ್ರಮುಖ 6 ಅಸಾಂಕ್ರಾಮಿಕ ರೋಗಗಳಾದ ಮಧುಮೇಹ (ಸಕ್ಕರೆ ಕಾಯಿಲೆ), ಅಧಿಕ ರಕ್ತದೊತ್ತಡ (BP) ಸಂಬಂಧ ಪರೀಕ್ಷೆ ಮತ್ತು ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತಪಾಸಣೆ

ಆಯುಷ್ ಪದ್ಧತಿಯ ಸಂವರ್ಧನೆ ಮೂಲಕ ಜೀವನಶೈಲಿ ಮಾರ್ಪಾಡು ಹಾಗೂ ಚಿಕಿತ್ಸಾ ಕ್ರಮಗಳಿಂದ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಗಳಿಗೆ ವೈದ್ಯರ ಸಲಹೆಯಂತೆ ನಿರಂತರ ಉಚಿತ ಔಷಧಿಗಳ ವಿತರಣೆ

ಅಸಾಂಕ್ರಾಮಿಕ ರೋಗಗಳಿಗೆ ಪ್ರಮುಖ ಕಾರಣಗಳಾದ – ಸ್ಟೀಪ್ ಅಗ್ನಿಯಾ (ನಿದ್ರೆಯಲ್ಲಿ ಉಸಿರುಕಟ್ಟುವಿಕೆ), BMI ಅಸಮತೋಲನ, ಧೂಮಪಾನ ಮತ್ತು ಮದ್ಯಪಾನ, ವ್ಯಸನ ಮುಕ್ತದ ಬಗ್ಗೆ ಆರೋಗ್ಯ ಶಿಕ್ಷಣ ಮತ್ತು ಆಪ್ತ ಸಮಾಲೋಚನೆಯ ಮುಖಾಂತರ ನಿಯಂತ್ರಣಕ್ಕೆ ಕ್ರಮ

ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ನಿರಂತರ ಉಚಿತ ತಪಾಸಣೆ ಹಾಗೂ ಚಿಕಿತ್ಸೆಯ ಮೂಲಕ ಅಡ್ಡ ಪರಿಣಾಮ ಮತ್ತು ಅಕಾಲಿಕ ಮರಣ ತಡೆಗಟ್ಟುವುದು ಯೋಜನೆಯ ಪ್ರಮುಖ ಉದ್ದೇಶ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This