ಬೆಂಗಳೂರು: 2025-26ನೇ ಸಾಲಿಗೆ ರಾಜ್ಯದ ಸರಕಾರಿ
ಪಿಯು ಕಾಲೇಜುಗಳಿಗೆ 4,689 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಿ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಅಗತ್ಯಗಳಿಗೆ ಅನುಗುಣವಾಗಿ 5,752 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಮತ್ತು ಅತಿಥಿ ಉಪನ್ಯಾಸಕರಿಗೆ ಗೌರವ ಧನಕ್ಕಾಗಿ ಅನುದಾನ ಬಿಡುಗಡೆ ಮಾಡುವಂತೆ ಪಿಯು ಇಲಾಖೆಯು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ವಿವಿಧ ವೃಂದದ ಉಪನ್ಯಾಸಕರ ಹುದ್ದೆಗಳಿಗೆ ಎದುರಾಗಿ 4,689 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರಕಾರವು ತೀರ್ಮಾನಿಸಿದೆ ಎಂದು ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.







