Home » ಉದ್ಯೋಗ » SSC ಖಾಲಿ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

SSC ಖಾಲಿ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ಆಯ್ಕೆ ಆಯೋಗ ಅಂದರೆ SSCಯು ಖಾಲಿ ಇರುವ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಕೊನೆಯ ದಿನಾಂಕ ಯಾವಾಗ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ತನ್ನ ಅಧಿಕೃತ ವೆಬ್‌ಸೈಟ್ ssc.gov.inನಲ್ಲಿ SSC CGL ಅಧಿಸೂಚನೆ 2025 ಅನ್ನು ಬಿಡುಗಡೆ ಮಾಡಿದ್ದು, 14,582 ಹುದ್ದೆಗಳನ್ನು ಪ್ರಕಟಿಸಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು SSC CGL ಪರೀಕ್ಷೆಯನ್ನು ವಾರ್ಷಿಕವಾಗಿ ನಡೆಸಲಾಗುತ್ತದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 9ರಿಂದ ಆರಂಭವಾಗಿದ್ದು, ಜುಲೈ 4 ಕೊನೆ ದಿನವಾಗಿದೆ.

ಅರ್ಜಿ ಸಲ್ಲಿಸುವ ವಿಧಾನಗಳು

* SSC ಅಧಿಕೃತ ವೆಬ್‌ಸೈಟ್‌ ssc.nic.inಗೆ ಭೇಟಿ ನೀಡಿ.

* ಅಭ್ಯರ್ಥಿ ಹೆಸರು, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಶೈಕ್ಷಣಿಕ ವಿವರಗಳು ಮತ್ತು ವಿಳಾಸ ಸೇರಿದಂತೆ ಅಗತ್ಯ ಮಾಹಿತಿಯನ್ನು ನೀಡಬೇಕಾಗುತ್ತದೆ.

* ನಿಮ್ಮ ನೋಂದಣಿ ಐಡಿ ಮತ್ತು ಪಾಸ್‌ವರ್ಡ್ ಅನ್ನು ರಚಿಸಲು ಒಂದು ಬಾರಿ ನೋಂದಣಿಯನ್ನು ಪೂರ್ಣಗೊಳಿಸಿ.

* ನಂತರ ಮುಖಪುಟದಲ್ಲಿ ಲಭ್ಯವಿರುವ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ.

* ಪೋರ್ಟಲ್‌ಗೆ ಲಾಗಿನ್ ಮಾಡಿ ಮತ್ತು SSC CGL 2025 ಪರೀಕ್ಷೆಗೆ ಅರ್ಜಿ ಸಲ್ಲಿಸಿ.

* ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ, ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಫಾರ್ಮ್ ಸಲ್ಲಿಸಿ.

* ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್‌ ಔಟ್‌ ತೆಗೆದುಕೊಳ್ಳಬಹುದು.

ಅರ್ಜಿ ಶುಲ್ಕದ ವಿವರ: ಅಭ್ಯರ್ಥಿಗಳು ssc.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ, ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಫಾರ್ಮ್‌ನಲ್ಲಿ ಎರಡು ಬಾರಿ ತಿದ್ದುಪಡಿ ಮಾಡಲು ಅವಕಾಶವಿರುತ್ತದೆ. ಆದರೆ, ಮೊದಲ ತಿದ್ದುಪಡಿಗೆ 200 ರೂಪಾಯಿ ಹಾಗೂ ಎರಡನೇ ತಿದ್ದುಪಡಿಗೆ 500 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. SSC ಪ್ರಕಾರ, CGL ಪರೀಕ್ಷೆಯನ್ನು ಆಗಸ್ಟ್ 13ರಿಂದ ಆಗಸ್ಟ್ 30, 2025ರ ವರೆಗೆ ನಿಗದಿಪಡಿಸಲಾಗಿದೆ. ಈ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷಾ ಸ್ವರೂಪದಲ್ಲಿ ನಡೆಸಲಾಗುವುದು.

ಯಾವೆಲ್ಲಾ ಇಲಾಖೆಗಳಲ್ಲಿ ಹುದ್ದೆಗಳಿಗೆ ನೇಮಕ?: ಸಹಾಯಕ ವಿಭಾಗ ಅಧಿಕಾರಿ-ಕೇಂದ್ರ ಸಚಿವಾಲಯ ಸೇವೆ, ಇಂಟಲಿಜೆನ್ಸ್‌ ಬ್ಯೂರೋ, ರೈಲ್ವೆ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಸಶಸ್ತ್ರ ಪಡೆಗಳ ಪ್ರಧಾನ ಕಚೇರಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಇತರ ಸಚಿವಾಲಯಗಳು/ಇಲಾಖೆಗಳು/ಸಂಸ್ಥೆಗಳು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This