ನೇಮಕಾತಿ ಆಯೋಗ: ಸಿಬಂದಿ ನೇಮಕಾತಿ ಆಯೋಗ(ಎಸ್‌ಎಸ್‌ಸಿ)
ಹುದ್ದೆ: ಕಾನ್‌ಸ್ಟೆಬಲ್ ಒಟ್ಟು ಹುದ್ದೆಗಳು: 7,565
ಲಿಂಗಾವಾರು ಹುದ್ದೆಗಳು: ಪುರುಷ: 5,069, ಮಹಿಳೆ: 2,495
ವಿದ್ಯಾರ್ಹತೆ: ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ದ್ವಿತೀಯ ಪಿಯುಸಿ ತೇರ್ಗಡೆ.
ಎನ್‌ಸಿಸಿ, ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ. ಮೀಸಲಾತಿಗನುಗುಣವಾಗಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಶುಲ್ಕ: 100ರೂ. ಎಸ್‌ಸಿ/ಎಸ್‌ಟಿ/ಮಾಜಿ ಯೋಧರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ.
ಕರ್ನಾಟಕದಲ್ಲಿರುವ ಪರೀಕ್ಷಾ ಕೇಂದ್ರಗಳು: ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 21-10-25
ಅರ್ಜಿ ಸಲ್ಲಿಸಲು: https://ssc.gov.in/login
ಹೆಚ್ಚಿನ ಮಾಹಿತಿಗಾಗಿ: nests.tribal.gov.in







