ಬೆಂಗಳೂರು:ಕೇಂದ್ರ ಸರ್ಕಾರದ ಹುದ್ದೆ ಪಡೆದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಬಯಸುವ ಯುವಜನರಿಗೆ ಭರ್ಜರಿ ಸುದ್ದಿ ಲಭಿಸಿದೆ. Intelligence Bureau (ಗುಪ್ತಚರ ಬ್ಯೂರೋ) ವತಿಯಿಂದ 2025ನೇ ಸಾಲಿನ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದ್ದು, 362 ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯುವ ಅವಕಾಶವನ್ನು ಬಳಸಿಕೊಳ್ಳಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಗುಪ್ತಚರ ಬ್ಯೂರೋ (IB)
ಒಟ್ಟು ಹುದ್ದೆಗಳು: 362
ಹುದ್ದೆಯ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 14, 2025
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ಯಾವುದೇ ಮಂಡಳಿ / ವಿಶ್ವವಿದ್ಯಾಲಯದಿಂದ SSLC (10ನೇ ತರಗತಿ) ಉತ್ತೀರ್ಣರಾಗಿರಬೇಕು.
ವಯೋಮಿತಿ
ಕನಿಷ್ಠ: 18 ವರ್ಷ
ಗರಿಷ್ಠ: 25 ವರ್ಷ
ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ವೇತನ ವಿವರ
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 56,900/- ವರೆಗೆ ಮಾಸಿಕ ವೇತನ ನೀಡಲಾಗುತ್ತದೆ (ಕೇಂದ್ರ ಸರ್ಕಾರದ ನಿಯಮಾನುಸಾರ).
ಅರ್ಜಿ ಶುಲ್ಕ
ಎಲ್ಲಾ ಸಮುದಾಯಗಳ ಅಭ್ಯರ್ಥಿಗಳಿಗೆ: ರೂ. 550/-
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:
1. ಲಿಖಿತ ಪರೀಕ್ಷೆ
2. ಕೌಶಲ ಪರೀಕ್ಷೆ
3. ಸಂದರ್ಶನ
4. ದಾಖಲೆ ಪರಿಶೀಲನೆ
5. ವೈದ್ಯಕೀಯ ತಪಾಸಣೆ
???? ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು Ministry of Home Affairs ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು:
???? ವೆಬ್‌ಸೈಟ್: https://www.mha.gov.in/hi







