ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025–26ನೇ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ತರಗತಿಗಳು (ಎಲ್ಕೆಜಿ–ಯುಕೆಜಿ) ಆರಂಭವಾಗಲಿವೆ. ಈ ಹಿನ್ನೆಲೆಯಲ್ಲಿ ಅರ್ಹ ಪೂರ್ವ ಪ್ರಾಥಮಿಕ ಶಿಕ್ಷಕರು ಹಾಗೂ ಆಯಾ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪೂರ್ವ ಪ್ರಾಥಮಿಕ ಶಿಕ್ಷಕರ ಅರ್ಹತೆ
ಪದವಿಪೂರ್ವ ಶಿಕ್ಷಣ (ಪಿಯುಸಿ)ದಲ್ಲಿ ಕನಿಷ್ಠ ಶೇ.50 ಅಂಕಗಳು
ಎನ್ಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಕಂಡ ಅರ್ಹತೆಗಳಲ್ಲಿ ಒಂದಾದರೂ ಇರಬೇಕು:
ಡಿಪ್ಲೊಮಾ ಇನ್ ನರ್ಸರಿ
ಬಿ.ಇಡಿ (ನರ್ಸರಿ) / ಟೀಚರ್ಸ್ ಎಜುಕೇಶನ್ / ಫ್ರೀ-ಸ್ಕೂಲ್ ಟೀಚರ್ ಎಜುಕೇಶನ್
ಬಿ.ಡಿ. ನರ್ಸರಿ
ಪೂರ್ವ ಪ್ರಾಥಮಿಕ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ:
ಪಿಯುಸಿಯಲ್ಲಿ ಕನಿಷ್ಠ ಶೇ.50 ಅಂಕಗಳು
ಎನ್ಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿ.ಇಡಿ
ಗರಿಷ್ಠ ವಯೋಮಿತಿ: 45 ವರ್ಷ
ಆಯಾ ಹುದ್ದೆಯ ಅರ್ಹತೆ
ಕನಿಷ್ಠ ಎಸ್ಎಸ್ಎಲ್ಸಿ ಉತ್ತೀರ್ಣ
ಗರಿಷ್ಠ ವಯೋಮಿತಿ: 45 ವರ್ಷ
ಅರ್ಜಿಯ ವಿಧಾನ
ಆಸಕ್ತ ಅಭ್ಯರ್ಥಿಗಳು ತಮ್ಮ ದಾಖಲೆಗಳೊಂದಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಮಗಿರಿಯಲ್ಲಿ ಅರ್ಜಿಪತ್ರ ಪಡೆದು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ
ಬಡ್ತಿ ಮುಖ್ಯ ಶಿಕ್ಷಕರು,
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಮಗಿರಿ
???? ಮೊಬೈಲ್: 6363691843







