ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (BECIL) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 154 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜೂನಿಯರ್ ಟೆಕ್ನಿಶಿಯನ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಯ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಜಮ್ಮು–ಕಾಶ್ಮೀರದಲ್ಲಿ ಉದ್ಯೋಗ ಅವಕಾಶ ದೊರೆಯಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (BECIL)
ಒಟ್ಟು ಹುದ್ದೆಗಳು: 154
ಅರ್ಜಿ ಸಲ್ಲಿಕೆ ವಿಧಾನ: ಆಫ್‌ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 18
ಉದ್ಯೋಗ ಸ್ಥಳ: ಜಮ್ಮು–ಕಾಶ್ಮೀರ
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ
SSLC, PUC, ಡಿಪ್ಲೊಮಾ, ITI, BE, B.Tech, ME, M.Tech, MCA ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಭರ್ತಿ ಮಾಡಲಾಗುವ ಪ್ರಮುಖ ಹುದ್ದೆಗಳು
ಜೂನಿಯರ್ ಟೆಕ್ನಿಶಿಯನ್
ಇತರೆ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳು
ಸಂಬಳ
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ತಿಂಗಳಿಗೆ ರೂ.25,000 ರಿಂದ ರೂ.1,00,000 ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಮೊದಲು www.becil.com ವೆಬ್‌ಸೈಟ್‌ಗೆ ಭೇಟಿ ನೀಡಿ
ಅರ್ಜಿಯ ನಮೂನೆಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬೇಕು.
ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ
ಅಧಿಸೂಚನೆಯಲ್ಲಿ ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.
ಮುಖ್ಯ ಸೂಚನೆ
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸುವಂತೆ BECIL ತಿಳಿಸಿದೆ







