ಎಲೆಕ್ಟ್ರಾನಿಕ್ ಮತ್ತು ರಾಡಾರ್ ಅಭಿವೃದ್ಧಿ ಸ್ಥಾಪನೆ
(DRDO LRDE) ವತಿಯಿಂದ 118 ಅಪ್ರೆಂಟಿಸ್ ಹುದ್ದೆಗಳನ್ನು ಸೇವೆಗೆ ಸೇರಿಸ್ಸಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು 2025ರ ಮೇ 25ರೊಳಗೆ ಅರ್ಜಿ ಸಲ್ಲಿಸಬಹುದು.ಈ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಹಾಗೂ ಅಗತ್ಯ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ಬಳಿಕವೇ ಅರ್ಜಿ ಸಲ್ಲಿಸಲು ಮನವಿ ಮಾಡಲಾಗಿದೆ. ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ
ಹುದ್ದೆಯ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 118
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ವಿದ್ಯಾರ್ಹತೆ:
DRDO LRDE ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITI, ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
DRDO LRDE ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 25-05-2025 ರಂತೆ 18 ವರ್ಷಗಳು ಆಗಿರಬೇಕು.
ಅರ್ಜಿಶುಲ್ಕ:
DRDO LRDE ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7000-9000 ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ: ಮೆರಿಟ್ ಪಟ್ಟಿ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಮೇ 06, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 25, 2025
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 06-05-2025 ರಿಂದ 25-05-2025 ರೊಳಗೆ DRDO LRDE ನೇಮಕಾತಿ ಅಧಿಕೃತ ವೆಬ್ಸೈಟ್ https://drdo.gov.in/drdo/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಯಾವ ಸೆಕ್ಷನ್ ಎಷ್ಟು ಹುದ್ದೆ
58 ಗ್ರಾಜುಯೇಟ್ ಅಪ್ರೆಂಟಿಸ್ಗಳು, 30 ಡಿಪ್ಲೊಮಾ ಅಪ್ರೆಂಟಿಸ್ಗಳು ಮತ್ತು 30 ಐಟಿಐ ಅಪ್ರೆಂಟಿಸ್ಗಳಿಗೆ 118 ಹುದ್ದೆಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ವಿವಿಧ ವಿಭಾಗಗಳಿಗೆ ಪೋಸ್ಟ್ವಾರು ಖಾಲಿ ಹುದ್ದೆಗಳನ್ನು ಪರಿಶೀಲಿಸಬಹುದು.
ಅರ್ಜಿಸಲ್ಲಿಸುವ ಕ್ರಮಗಳು
ಅಧಿಕೃತ ವೆಬ್ಸೈಟ್ https://drdo.gov.in/drdo/ ಗೆ ಭೇಟಿ ನೀಡಿ.
DRDO LRDE ನೇಮಕಾತಿ ಅಥವಾ ಉದ್ಯೋಗ ಸಂಬಂಧಿತ ವಿಭಾಗದಲ್ಲಿ ಇತ್ತೀಚಿನ ಅಧಿಸೂಚನೆಗಳನ್ನು ಪರಿಶೀಲಿಸಿ.
DRDO LRDE ಅಪ್ರೆಂಟಿಸ್ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ನೀವು ಅರ್ಹರಾಗಿದ್ದೀರಾ ಎಂಬುದನ್ನು ಸ್ಪಷ್ಟವಾಗಿ ಪರಿಶೀಲಿಸಿ.
ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮೊದಲು ಕೊನೆಯ ದಿನಾಂಕ (25-05-2025) ಅನ್ನು ಗಮನಿಸಿ.
ಅರ್ಹತೆ ಇದ್ದರೆ, ಅರ್ಜಿ ನಮೂನೆಯನ್ನು ಸರಿಯಾದ ಹಾಗೂ ಸಂಪೂರ್ಣ ಮಾಹಿತಿಯೊಂದಿಗೆ ಭರ್ತಿ ಮಾಡಿ. ಯಾವುದೇ ತಪ್ಪುಗಳಿರಬಾರದು.
ಅರ್ಜಿಯನ್ನು ಸಲ್ಲಿಸಿದ ನಂತರ, ನಿಮ್ಮ ಅರ್ಜಿ ಸಂಖ್ಯೆಯನ್ನು ಅಥವಾ ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಭವಿಷ್ಯಕ್ಕಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳಿ.







