ಬೆಂಗಳೂರು: ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಕುರಿತಂತೆ ಇಂದು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಎನ್.ಪಿ.ಎಸ್. ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಉಮಾ ಮಹದೇವನ್ ಹಾಗೂ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ರೇಜು ಅವರ ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.
ಷಡಕ್ಷರಿ ಹಾಗೂ ಸಂಘದ ಪದಾಧಿಕಾರಿಗಳು ಸಭೆ ನಡೆಸಿ ವಿವರವಾಗಿ ಒಂದು ಗಂಟೆಗಳ ಕಾಲ ಸಭೆಯಲ್ಲಿ ಚರ್ಚಿಸಲಾಯಿತು
ಸಭೆಯಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಸಂಬಂಧ ವಿವರವಾದ ವರದಿಯನ್ನು ಸರ್ಕಾರದ ಸಮಿತಿಗೆ ಸಲ್ಲಿಸಲಾಯಿತು. ಸಮಿತಿಯು ಆದಷ್ಟು ಶೀಘ್ರದಲ್ಲಿ ವರದಿಯನ್ನು ಸಿದ್ಧಪಡಿಸಿ ಸರ್ಕಾರಿ ನೌಕರರಿಗೆ ಪೂರಕವಾಗುವ ರೀತಿಯಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಸ್ಪಷ್ಟ ಭರವಸೆ ನೀಡಿದೆ.







